ಯಾದಗಿರಿ: ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಉಪ್ಪಿಟ್ಟು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸುಮಾರು 52 ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಆತಂಕಕ್ಕೊಳಗಾಗಿದ್ದಾರೆ.
ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.